February 2023

ಇಂದಿನಿಂದ ‌ಫೆ.24ರವರೆಗೆ ರಾಜ್ಯ ಬಜೆಟ್ ಅಧಿವೇಶನ| ಫೆ.17ರಂದು ಬಜೆಟ್ ಮಂಡನೆ

ಸಮಗ್ರ ನ್ಯೂಸ್: ಇಂದಿನಿಂದ ಫೆಬ್ರವರಿ 24ರವರೆಗೆ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣದ ಮೇಲೆ ಸೋಮವಾರದಿಂದ ಚರ್ಚೆಗಳು ನಡೆಯಲಿವೆ.‌ ಫೆಬ್ರವರಿ 17ರಂದು ಬಜೆಟ್ ಮಂಡನೆಯಾಗಲಿದ್ದು, ಇದೇ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ರಾಜ್ಯದಲ್ಲಿ ಬಜೆಟ್ ಅಧಿವೇಶನ ಶುರುವಾಗಲಿದೆ. ಈ ಹಿನ್ನೆಲೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ,ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಇದು ಈ ವಿಧಾನಸಭೆಯ 15ನೆಯ ಮತ್ತು ಕೊನೆಯ ಅಧಿವೇಶನ ಆಗಿರುತ್ತದೆ. ಈಗಿನ ಶಾಸಕರು ಐದು ವರ್ಷ ಅವಧಿಯನ್ನು […]

ಇಂದಿನಿಂದ ‌ಫೆ.24ರವರೆಗೆ ರಾಜ್ಯ ಬಜೆಟ್ ಅಧಿವೇಶನ| ಫೆ.17ರಂದು ಬಜೆಟ್ ಮಂಡನೆ Read More »

ಶಿವಮೊಗ್ಗ ವಿಮಾನನಿಲ್ದಾಣಕ್ಕೆ ನನ್ನ ಹೆಸರು ಬೇಡ, ಮಹನೀಯರ ಹೆಸರಿಡಿ| ಸಿಎಂಗೆ ಪತ್ರ ಬರೆದ ಮಾಜಿ‌ ಸಿಎಂ ಯಡಿಯೂರಪ್ಪ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿವಮೊಗ್ಗದ ನೂತನ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರಿಡುವುದಾಗಿ ಘೋಷಿಸಿದ್ದರು. ಅಲ್ಲದೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳಿದ್ದರು. ಈ ಬೆನ್ನಲ್ಲೇ ತಮ್ಮ ಹೆಸರು ಇಡೋದು ಬೇಡ ಮಹನೀಯರ ಹೆಸರಿಡುವಂತೆ ಸಿಎಂಗೆ ಪತ್ರ ಬರೆದು ಯಡಿಯೂರಪ್ಪ ಕೋರಿದ್ದಾರೆ. ಈ ಕುರಿತಂತೆ ಸಿಎಂ ಬೊಮ್ಮಾಯಿ ಅವರಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದು, ಶಿವಮೊಗ್ಗ ಜಿಲ್ಲೆಯ ಬಹು ದಿನಗಳ ಕನಸು ವಿಮಾನ ನಿಲ್ದಾಣವಾಗಿದೆ. ಈ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ

ಶಿವಮೊಗ್ಗ ವಿಮಾನನಿಲ್ದಾಣಕ್ಕೆ ನನ್ನ ಹೆಸರು ಬೇಡ, ಮಹನೀಯರ ಹೆಸರಿಡಿ| ಸಿಎಂಗೆ ಪತ್ರ ಬರೆದ ಮಾಜಿ‌ ಸಿಎಂ ಯಡಿಯೂರಪ್ಪ Read More »

ಪುತ್ತೂರು ಶಾಸಕ ಸಂಜೀವ ಮಠಂದೂರಿಗೆ ಬಿಸಿತುಪ್ಪವಾದ “ಅಣಬೆ” ಹೇಳಿಕೆ| ಬಿಜೆಪಿ ಕಾರ್ಯಕರ್ತರಿಂದ ಶಾಸಕರಿಗೆ ನಡುರಸ್ತೆಯಲ್ಲೇ ತರಾಟೆ

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಸಂಜೀವ ಮಠಂದೂರು ಅಣಬೆ ಹೇಳಿಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಗೃಹ ಸಚಿವ ಅಮಿತ್ ಷಾ ಕಾರ್ಯಕ್ರಮದ ಬಗ್ಗೆ ಆಮಂತ್ರಣ ಪತ್ರಿಕೆ ಹಂಚಲು ಪುತ್ತೂರಿನಲ್ಲಿ ಕಾಲ್ನಡಿಗೆ ಜಾಥಾ ನಡೆಸುತ್ತಿದ್ದಾಗ ಬಿಜೆಪಿ ಕಾರ್ಯಕರ್ತರೇ ಎರಡು ಗುಂಪುಗಳಾಗಿ ಮಾತಿನ ಚಕಮಕಿ ನಡೆಸಿದ್ದು ಕೈ ಕೈ ಮಿಲಾಯಿಸಲು ಮುಂದಾಗಿದ್ದಾರೆ. ಅಮಿತ್ ಷಾಗೆ ಸ್ವಾಗತ ಕೋರಿ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಬ್ಯಾನರ್ ಅಳವಡಿಸಿದ್ದರು. ಚುನಾವಣೆ ಸಂದರ್ಭದಲ್ಲಿ ಪ್ರತ್ಯೇಕ ಬ್ಯಾನರ್ ಹಾಕಿದ್ದ ವಿಚಾರದಲ್ಲಿ ಮಾಧ್ಯಮದ ಪ್ರಶ್ನೆಗೆ

ಪುತ್ತೂರು ಶಾಸಕ ಸಂಜೀವ ಮಠಂದೂರಿಗೆ ಬಿಸಿತುಪ್ಪವಾದ “ಅಣಬೆ” ಹೇಳಿಕೆ| ಬಿಜೆಪಿ ಕಾರ್ಯಕರ್ತರಿಂದ ಶಾಸಕರಿಗೆ ನಡುರಸ್ತೆಯಲ್ಲೇ ತರಾಟೆ Read More »

“ಪಿಲಿ”ಗೆ ಕೋರ್ಟ್ ತಡೆ!!

ಸಮಗ್ರ ನ್ಯೂಸ್: ಫೆ.10 ರಂದು ಬಿಡುಗಡೆಯಾಗಲಿರುವ “ಪಿಲಿ”ತುಳು ಸಿನಿಮಾ ಥಿಯೇಟರ್ ಗಳಲ್ಲಿ ಪ್ರದರ್ಶಿಸದಂತೆ ನ್ಯಾಯಾಲಯ ತಡೆ ನೀಡಿದೆ. ಈ ಚಿತ್ರಕ್ಕೆ 40 ಲಕ್ಷ ರೂ.ಬಂಡವಾಳ ಹೂಡಿದ್ದ ನಿರ್ಮಾಪಕ ಮಂಜೀತ್ ನಾಗರಾಜ್ ಅವರ ಬದಲು ಪುತ್ತೂರಿನ ಭರತ್ ಭಂಡಾರಿ ಎಂಬಾತ ಬೇರೆ ನಿರ್ಮಾಪಕರ ಹೆಸರನ್ನು ಬಳಸಿಕೊಂಡು ಚಿತ್ರ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು ಇದಕ್ಕೆ ತಡೆ ನೀಡುವಂತೆ ನಿರ್ಮಾಪಕ ಮಂಜೀತ್ ನಾಗರಾಜ್ ಅವರು ನ್ಯಾಯಾಲಯದ ಮೊರೆಹೋಗಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯ ನಾಳೆ ಬಿಡುಗಡೆಗೊಳ್ಳಲಿರುವ “ಪಿಲಿ” ಚಿತ್ರದ ಪ್ರದರ್ಶನವನ್ನು ತಡೆ ಹಿಡಿದಿದೆ.

“ಪಿಲಿ”ಗೆ ಕೋರ್ಟ್ ತಡೆ!! Read More »

ಸುಳ್ಯ: ಸಾಹಿತಿ , ಜ್ಯೋತಿಷಿ ಭೀಮರಾವ್ ವಾಷ್ಠರ್ ರಿಗೆ ಸನ್ಮಾನಗಳ ಸರಮಾಲೆ

ಸಮಗ್ರ ನ್ಯೂಸ್: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟ ಆಯೋಜಿಸಿದ್ದ ಸಾಹಿತ್ಯ ಜಾನಪದ ಸಂಗೀತ ಕಲೋತ್ಸವ ಸಮಾರಂಭದಲ್ಲಿ ಸುಳ್ಯದ ಸಾಹಿತಿ ಮತ್ತು ಖ್ಯಾತ ಜ್ಯೋತಿಷಿ ಹಾಗೂ ಗಾಯಕರಾದ ಎಚ್ .ಭೀಮರಾವ್ ವಾಷ್ಠರ್ ಅವರನ್ನು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಗೌರವಾಧ್ಯಕ್ಷ ಶ್ರೀ ರವೀಂದ್ರ ಶೆಟ್ಟಿ ರವರು ವಾಷ್ಠರ್ ರವರ ಅಪಾರ ಸಾಧನೆ ಪರಿಗಣಿಸಿ ಸನ್ಮಾನಿಸಿ ಗೌರವಿಸಿದರು. ಐವರ್ನಾಡಿನಲ್ಲಿ ನಡೆದ ಅಯ್ಯಪ್ಪ ಸ್ವಾಮೀ

ಸುಳ್ಯ: ಸಾಹಿತಿ , ಜ್ಯೋತಿಷಿ ಭೀಮರಾವ್ ವಾಷ್ಠರ್ ರಿಗೆ ಸನ್ಮಾನಗಳ ಸರಮಾಲೆ Read More »

ಜಿಎಸ್ಟಿ ವಂಚನೆ ಆರೋಪ| ಅದಾನಿ ಗ್ರೂಪ್ಸ್ ಮೇಲೆ‌ ಅಧಿಕಾರಿಗಳಿಂದ ದಾಳಿ

ಸಮಗ್ರ ನ್ಯೂಸ್: ಜಿಎಸ್‌ಟಿ ಜಮಾ ಮಾಡಿಲ್ಲ ಎಂಬ ಆರೋಪದಡಿ ಗೌತಮ್​ ಅದಾನಿ ಒಡೆತನದ ಅದಾನಿ ಕಂಪನಿ ಮೇಲೆ ರಾಜ್ಯ ಅಬಕಾರಿ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯ ತೆರಿಗೆ ಇಲಾಖೆಯು ಪರ್ವಾನೂರಿನಲ್ಲಿರುವ ಅದಾನಿ ಕಂಪನಿ ಮೇಲೆ ದಾಳಿ ಮಾಡಿದೆ. ಬುಧವಾರದಂದು ರಾತ್ರಿ ವೇಳೆ ಹಿಮಾಚಲ ಪ್ರದೇಶದಲ್ಲಿರುವ ಅದಾನಿ ವಿಲ್ಮಾರ್ ಗ್ರೂಪ್​ನ ಸಿ ಆಯಂಡ್​ ಎಫ್​ ಸ್ಟೋರ್​ಗಳ ಮೇಲೆ ​ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಳೆದ 5 ವರ್ಷದಿಂದ ಸರಕು ಮತ್ತು

ಜಿಎಸ್ಟಿ ವಂಚನೆ ಆರೋಪ| ಅದಾನಿ ಗ್ರೂಪ್ಸ್ ಮೇಲೆ‌ ಅಧಿಕಾರಿಗಳಿಂದ ದಾಳಿ Read More »

ಕೊಟ್ಟಿಗೆಹಾರ: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ

ಸಮಗ್ರ ನ್ಯೂಸ್:ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ಬುಧವಾರ ನಡೆದಿದೆ. ಶಿಕಾರಿ ಮಾಡುವವರ ಗುಂಡಿಗೆ ಕಡವೆ ಬಲಿಯಾಗಿರುವ ಸಾಧ್ಯತೆ ಇದ್ದು ಬುಧವಾರ ಚಾರ್ಮಾಡಿ ಘಾಟ್‌ನ ಮಲಯಮಾರುತದ ಬಳಿ ಹೆದ್ದಾರಿ ಬದಿಯ ಚರಂಡಿಯಲ್ಲಿ ಕಡವೆ ಮೃತದೇಹ ಪತ್ತೆಯಾಗಿದೆ. ಕಡವೆಯ ಕಿವಿ, ತೊಡೆ, ಹೊಟ್ಟೆ ಭಾಗದಲ್ಲಿ ಗುಂಡು ತಗುಲಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ವರ್ಷದ ಕಡವೆ ಇದಾಗಿದ್ದು ಚಾರ್ಮಾಡಿ ಘಾಟ್ ಹೆದ್ದಾರಿ ಮಾರ್ಗವಾಗಿ ಪ್ರಯಾಣಿಸುವ ವಾಹನ ಚಾಲಕರು ಕಡವೆ

ಕೊಟ್ಟಿಗೆಹಾರ: ದುಷ್ಕರ್ಮಿಗಳ ಗುಂಡೇಟಿಗೆ ಕಡವೆ ಬಲಿ Read More »

ಸುಳ್ಯ: ಕಲ್ಯಾಣ ಮಂಟಪಕ್ಕೆ ಬಾರದ ವರ| ಕಾದು ಸುಸ್ತಾದ ವಧು; ಮದುವೆ ರದ್ದು

ಸಮಗ್ರ ನ್ಯೂಸ್: ಸುಳ್ಯದ ಪುರಭವನದಲ್ಲಿ ನಡೆಯಬೇಕಾಗಿದ್ದ ಮದುವೆಯೊಂದು ವರ ಬಾರದ ಕಾರಣ ರದ್ದುಗೊಂಡ ಘಟನೆ ವರದಿಯಾಗಿದ್ದು , ವರನ ಮೊದಲ ಪತ್ನಿ ಗಂಡನ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ನಡೆದಿದೆ. ಸುಳ್ಯದ ಉಬರಡ್ಕ ಗ್ರಾಮದ ಯುವತಿಗೆ ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಯುವಕನೊಂದಿಗೆ ಮದುವೆ ನಿಗದಿಯಾಗಿತ್ತು. ಫೆ.9ರಂದು ಕೆ.ವಿ.ಜಿ. ಪುರಭವನದಲ್ಲಿ ಮದುವೆ ನಡೆಯಬೇಕಾಗಿತ್ತು. ಮದುಮಗನ ಕಡೆಯ ಬಂದುಮಿತ್ರರು ಆಗಮಿಸಿದ್ದು ಟೌನ್‌ಹಾಲ್ ಅಲಂಕಾರವೂ ನಡೆದಿತ್ತು. ಫೆ.8ರಂದು ವಧುವಿನ ಮನೆಯಲ್ಲಿ ಡಿ.ಜೆ. ಅಳವಡಿಸಿ ಮದುವೆ ಸಂಭ್ರಮ

ಸುಳ್ಯ: ಕಲ್ಯಾಣ ಮಂಟಪಕ್ಕೆ ಬಾರದ ವರ| ಕಾದು ಸುಸ್ತಾದ ವಧು; ಮದುವೆ ರದ್ದು Read More »

ಪುತ್ತೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ| ಫೆ.11 ರಂದು ಕೆಎಸ್ಆರ್‌ ಟಿಸಿ ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ಪುತ್ತೂರಿನಲ್ಲಿ ಫೆ.11ರಂದು ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಹಾಗೂ ಸಚಿವರುಗಳು ಭಾಗವಹಿಸಲಿದ್ದು, ಈ ಹಿನ್ನೆಲೆಯಲ್ಲಿ KSRTC ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ ಮಾಡಲು ಕಾರ್ಯಕ್ರಮದ ಸಂಯೋಜಕರಿಂದ ಬೇಡಿಕೆ ಬಂದಿದೆ. ಅದರಂತೆ ಪುತ್ತೂರು ವಿಭಾಗದಿಂದ ಸದರಿ ಕಾರ್ಯಕ್ರಮದ ಪ್ರಯುಕ್ತ ಗರಿಷ್ಠ ಸಂಖ್ಯೆಯಲ್ಲಿ ಬಸ್ಸುಗಳನ್ನು ನಿಯೋಜನೆ

ಪುತ್ತೂರು: ಕ್ಯಾಂಪ್ಕೋ ಸುವರ್ಣ ಮಹೋತ್ಸವಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ| ಫೆ.11 ರಂದು ಕೆಎಸ್ಆರ್‌ ಟಿಸಿ ಸಂಚಾರದಲ್ಲಿ ವ್ಯತ್ಯಯ Read More »

ಹಿಂದೂ ಕಾರ್ಯಕರ್ತರು ಅಣಬೆಗಳಿದ್ದಂತೆ, ಹೆಚ್ಚು ಬಾಳಿಕೆ ಇಲ್ಲ!! ವಿವಾದಾತ್ಮಕ ಹೇಳಿಕೆ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು| ಶಾಸಕರ ಹೇಳಿಕೆ ವಿರುದ್ದ ಕಾರ್ಯಕರ್ತರು ಗರಂ

ಸಮಗ್ರ ನ್ಯೂಸ್: ನಾಡಿನ ಹಿಂದೂ ಕಾರ್ಯಕರ್ತರನ್ನು ಅಣಬೆಗೆ ಹೋಲಿಸುವ ಮೂಲಕ ಪುತ್ತೂರು ಶಾಸಕ ಸಂಜೀವ ಮಠಂದೂರು ಚುನಾವಣೆ ಹೊತ್ತಿನಲ್ಲಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇನ್ನು ಶಾಸಕರ ವಿರುದ್ದ ಹಿಂದೂ ಸಂಘಟನೆಗಳು ಕಿಡಿಕಿಡಿಕಾರಿವೆ. ಶಾಸಕ ಸಂಜೀವ ಮಠಂದೂರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಹಿಂದೂಗಳನ್ನು ‘ಅಣಬೆ’ ಗೆ ಹೋಲಿಸಿ ಮಾತನಾಡಿದ್ದಾರೆ. ಈಗ ‘ಅಣಬೆ’ ಹೇಳಿಕೆ ವಿರುದ್ದ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಪುತ್ತೂರಿಗೆ ಅಮಿತ್ ಶಾ ಭೇಟಿಗೆ ಶುಭಕೋರಿ ನಗರದಲ್ಲಿ ಹಿಂದೂ ಮುಖಂಡ ಅರುಣ್ ಪುತ್ತಿಲ ಬೆಂಬಲಿಗರು ಕಟೌಟ್, ಬ್ಯಾನರ್

ಹಿಂದೂ ಕಾರ್ಯಕರ್ತರು ಅಣಬೆಗಳಿದ್ದಂತೆ, ಹೆಚ್ಚು ಬಾಳಿಕೆ ಇಲ್ಲ!! ವಿವಾದಾತ್ಮಕ ಹೇಳಿಕೆ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು| ಶಾಸಕರ ಹೇಳಿಕೆ ವಿರುದ್ದ ಕಾರ್ಯಕರ್ತರು ಗರಂ Read More »