Ad Widget .

ವೇತನ ಹೆಚ್ಚಳಕ್ಕೆ ಆಗ್ರಹ| ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಸಮಗ್ರ ನ್ಯೂಸ್: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

Ad Widget . Ad Widget .

ಸರ್ಕಾರ ಹಲವು ಬಾರಿ ಮೌಖಿಕ ಭರವಸೆಗಳನ್ನು ನೀಡಿ, ಪ್ರತಿಭಟನೆ ಕೈಬಿಡುವಂತೆ ಮಾಡಿತ್ತು. ಆದರೆ, ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ, ಹೀಗಾಗಿ ಮರಳಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಈ ಬಾರಿ ಯಾವುದೇ ಕಾರಣಕ್ಕೂ ವೇತನ ಹೆಚ್ಚಳ ಮಾಡದ, ನಮ್ಮ ಬೇಡಿಕೆಗಳು ಈಡೇರಿಸದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಸಾರಿಗೆ ನೌಕರರ ಸಂಘದ ಸದಸ್ಯರು ಹೇಳಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನೌಕರರು ಇರುವ ಸಂಸ್ಥೆಯಲ್ಲಿ 2016ರಲ್ಲಿ ವೇತನ ಪರಿಷ್ಕರಿಸಲಾಗಿತ್ತು.

Ad Widget . Ad Widget .

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆಯಲ್ಲಿ 2 ಸಾವಿರಕ್ಕೂ ಹೆಚ್ಚು ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬುದು ನಮ್ಮ ಉದ್ದೇಶವಾಗಿದ್ದು, ಸಾಮಾನ್ಯ ಸಾರಿಗೆಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಇದರ ನಡುವೆಯೂ ಸರ್ಕಾರ ನಮಗೆ ಯಾವುದೇ ಸಕಾರಾತ್ಮಕ ಉತ್ತರ ನೀಡಿದ್ದರೆ, ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಧರಣಿಯಾಗಿ ಪರಿವರ್ತಿಸಲಾಗುವುದು ಎಂದು ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಎಚ್ಚರಿಸಿದ್ದಾರೆ.

Leave a Comment

Your email address will not be published. Required fields are marked *