Ad Widget .

ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಾಸ್| ವೇತನ ಹೆಚ್ಚಳದ ಬೆನ್ನಲ್ಲೇ ಬಂದ್ ಕೈಬಿಟ್ಟ ನೌಕರರು

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇಕಡಾ 17ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಮುಷ್ಕರನಿರತ ನೌಕರರು ತಮ್ಮ ಮುಷ್ಕರ ಕೈಬಿಟ್ಟು ಸೇವೆಗೆ ಮರಳಿದ್ದಾರೆ.

Ad Widget . Ad Widget .

ಸರ್ಕಾರ ನಾವು ಹೇಳಿದಷ್ಟು ವೇತನ ಹೆಚ್ಚಳ ಮಾಡಿಲ್ಲ, ನಾವು ಶೇಕಡಾ 40ರಷ್ಟು ವೇತನ ಹೆಚ್ಚಳ ಮಾಡುವಂತೆ ಕೇಳಿದ್ದೆವು, ಸರ್ಕಾರ ತನ್ನ ಇತಿಮಿತಿಯಲ್ಲಿ ಶೇಕಡಾ 17ರಷ್ಟು ಹೆಚ್ಚಳ ಮಾಡಿದೆ. ಹಾಗಾಗಿ ತಕ್ಷಣದಿಂದ ಮುಷ್ಕರ ಕೈಬಿಡಲು ತೀರ್ಮಾನಿಸಿದ್ದೇವೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Ad Widget . Ad Widget .

ಎನ್.ಪಿ.ಎಸ್ ಕುರಿತು ಇತರೆ ರಾಜ್ಯಗಳಲ್ಲಿ ಯಾವ ರೀತಿ ಇದೆ, ಅದರ ಆರ್ಥಿಕ ಪರಿಣಾಮ ಇವುಗಳ ಕುರಿತು ಅಧ್ಯಯನ ಕೈಗೊಂಡು ವರದಿ ನೀಡಲು ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗುವುದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಇದಕ್ಕಾಗಿ ಎರಡು ತಿಂಗಳು ಕಾಲಾವಕಾಶ ನೀಡಿದ್ದಾರೆ. ಅದನ್ನು ಕೂಡ ನಾವು ಒಪ್ಪಿದ್ದೇವೆ. ನಮ್ಮ ಹೋರಾಟ ಮುಂದುವರಿಯಲಿದೆ. ಆದರೂ ಸದ್ಯಕ್ಕೆ ಜನಸಾಮಾನ್ಯರಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಮುಷ್ಕರ ಕೈಬಿಡುತ್ತಿದ್ದೇವೆ ಎಂದು ಷಡಕ್ಷರಿ ತಿಳಿಸಿದರು.

Leave a Comment

Your email address will not be published. Required fields are marked *