Ad Widget .

ಮಡಿಕೇರಿ: ಹುಲಿ ದಾಳಿಗೆ ಕಾಡುಕೋಣ ಬಲಿ

ಸಮಗ್ರ ನ್ಯೂಸ್: ಹುಲಿ ದಾಳಿಗೆ ಕಾಡು ಕೋಣವೊಂದು ಬಲಿಯಾಗಿರುವ ಘಟನೆ ಪಾಲಿಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗೌರಿಬೆಟ್ಟ ಎಸ್ಟೇಟ್ ನಲ್ಲಿ ನಡೆದಿದೆ.

Ad Widget . Ad Widget .

ಇಂದು ಬೆಳಗ್ಗೆ ಕಾರ್ಮಿಕರು ಕೆಲಸಕ್ಕೆಂದು ತೋಟಕ್ಕೆ ತೆರಳಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದ್ದು ನೆನ್ನೆ ತಡ ರಾತ್ರಿ ಕಾಡು ಕೋಣದ ಮೇಲೆ ಹುಲಿ ದಾಳಿ ನಡೆಸಿರಬಹುದು ಎಂದು ಅಂದಾಜಿಸಲಾಗಿದೆ.

Ad Widget . Ad Widget .

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಹಲವಾರು ದಿನಗಳಿಂದ ಈ ಭಾಗದಲ್ಲಿ ಹುಲಿಯೊಂದು ಓಡಾಟ ನಡೆಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಗ್ರಾಮಸ್ಥರು ಹುಲಿ ಸೆರೆಗೆ ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *