Ad Widget .

ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಸಾವು| ಹೃದಯ ವಿದ್ರಾವಕ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಯುವಕನೊಬ್ಬ ಕುಸಿದು ಬಿದ್ದು ಹೃದಯಾಘಾತಗೊಂಡು ಸಾವನ್ನಪ್ಪಿದ ದುರಂತ ಘಟನೆ ವರದಿಯಾಗಿದ್ದು, ಹೃದಯ ವಿದ್ರಾವಕ ವಿಡಿಯೋ ವೈರಲ್‌ ಆಗಿದೆ.

Ad Widget . Ad Widget .

ಸಿಕಂದರಾಬಾದ್ ನ ಲಾಲಾಪೇಟ್ ಪ್ರೊಫೆಸರ್ ಜಯಶಂಕರ್ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಬ್ಯಾಡ್ಮಿಂಟನ್ ಆಡುತ್ತಿದ್ದ 39 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತನನ್ನು ಮಲ್ಕಾಜ್ಗಿರಿ ಮೂಲದ ಪರಮೇಶ್ ಯಾದವ್ ಎಂದು ಗುರುತಿಸಲಾಗಿದೆ.

Ad Widget . Ad Widget .

ವರದಿಗಳ ಪ್ರಕಾರ, ಯಾದವ್ ತಮ್ಮ ಕಚೇರಿಯಿಂದ ಹಿಂದಿರುಗಿದ ನಂತರ ನಿಯಮಿತವಾಗಿ ಬ್ಯಾಡ್ಮಿಂಟನ್ ಆಡುತ್ತಿದ್ದರು. ನಿನ್ನೆ ಕೂಡ ಅವರು ತಮ್ಮ ದಿನಚರಿಯಂತೆ ಕ್ರೀಡಾಂಗಣಕ್ಕೆ ಹೋಗಿದ್ದರು. ಮಂಗಳವಾರ ಸಂಜೆ 7.30 ರ ಸುಮಾರಿಗೆ ಈ ಘಟನೆ ನಡೆದಿದೆ. ಅವರನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *