ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ(ಒಪಿಎಸ್) ಜಾರಿಗೆ ಸಮಿತಿ ರಚಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ad Widget ... ..

ರಾಜ್ಯ ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿದೆ.

Ad Widget

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆ (Defined – Persion Scheme)ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶಿಸಲಾಗಿದೆ.

Leave a Comment

Your email address will not be published. Required fields are marked *