Ad Widget .

ಮುಂದಿನ ಮೂರು ದಿನ ಈ ರಾಜ್ಯಗಳಲ್ಲಿ ಮಳೆ‌ ಸಾಧ್ಯತೆ| ಹವಾಮಾನ ಇಲಾಖೆಯಿಂದ ಮಾಹಿತಿ

ಸಮಗ್ರ ನ್ಯೂಸ್: ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಬಿಸಿಲ ಝಳ ಗಣನೀಯವಾಗಿ ಹೆಚ್ಚಾಗಲಿದೆ.

Ad Widget . Ad Widget .

ರಾಷ್ಟ್ರ ರಾಜಧಾನಿ ದೆಹಲಿ, ಗುಜರಾತ್, ರಾಜಸ್ಥಾನ ಕರ್ನಾಟಕ, ದಂತಹ ರಾಜ್ಯಗಳಲ್ಲಿ ತಾಪಮಾನವು ಗಣನೀಯವಾಗಿ ಹೆಚ್ಚಾಗಿದೆ. ದೆಹಲಿಯಲ್ಲಿ ಗರಿಷ್ಠ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿರುವ ಸಮಯದಲ್ಲಿ ವರುಣನ ಆಗಮನವಾಗಿದ್ದು, ಭೂಮಿ ತಂಪಾಗಿದೆ.‌ ಮುಂದಿನ 24 ಗಂಟೆಗಳಲ್ಲಿ ತಮಿಳುನಾಡು, ಕೇರಳ, ಲಕ್ಷದ್ವೀಪ, ಅಸ್ಸಾಂ, ಅರುಣಾಚಲಪ್ರದೇಶ, ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ, ಅಷ್ಟೇ ಅಲ್ಲದೆ ಪಂಜಾಬ್​ನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

Ad Widget . Ad Widget .

ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕಾಡುತ್ತಿದ್ದ ಬಿಸಿಲು ಈಗ ಫೆಬ್ರವರಿಯಲ್ಲೇ ಶುರುವಾಗಿದೆ. ಮುಂದಿನ 5 ದಿನಗಳವರೆಗೆ ವಾಯುವ್ಯ, ಮಧ್ಯ ಹಾಗೂ ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನವು ಸರಾಸರಿಗಿಂತ ಮೂರರಿಂದ ಐದು ಡಿಗ್ರಿ ಸೆಲ್ಸಿಯಸ್​ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಚಳಿಯ ವಾತಾವರಣ ಶುರುವಾಗಿದೆ. ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 11.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Leave a Comment

Your email address will not be published. Required fields are marked *