Ad Widget .

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ

ಸಮಗ್ರ ನ್ಯೂಸ್: ಮಾರ್ಚ್​ 9 ರಂದು ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭಗಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಲು ಉಚಿತ ಬಸ್​ ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿದೆ.

Ad Widget . Ad Widget .

ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ.

Ad Widget . Ad Widget .

ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಸೇವೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿತ್ತು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಲಭ್ಯವಾಗಲಿದೆ.

ಪರೀಕ್ಷಾ ದಿನ ಸಂಚರಿಸುವಾಗ ಬಸ್ ನಿರ್ವಾಹಕರಿಗೆ ಪರೀಕ್ಷೆಯ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಈ ಕುರಿತಂತೆ ಚಾಲಕ ಮತ್ತು ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡುವಂತೆ ನಿಗಮ ಸಲಹೆ ಸೂಚನೆಯನ್ನು ನೀಡಲಾಗಿದೆ.

Leave a Comment

Your email address will not be published. Required fields are marked *