Ad Widget .

ಮಾ.9ರಂದು ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಕರೆ

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಮಾರ್ಚ್‌ 9ರಂದು ರಾಜ್ಯ ಬಂದ್‌ಗೆ ಕಾಂಗ್ರೆಸ್ ಕರೆ ನೀಡಿದೆ. ಮಾರ್ಚ್ 9ರಂದು ಬೆಳಿಗ್ಗೆ 9ರಿಂದ 11 ಗಂಟೆ ವರೆಗೆ ಬಂದ್‌ ಮಾಡಲಾಗುವುದು. ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು.

Ad Widget . Ad Widget .

ಕೊರಟಗೆರೆ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ‘ವ್ಯಾಪಾರಿಗಳು ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು‌. ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ. ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ ನೀಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಜನ ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Ad Widget . Ad Widget .

ಭ್ರಷ್ಟಾಚಾರದಿಂದಾಗಿ ರಾಜ್ಯಕ್ಕೆ ಕಳಂಕ ಬಂದಿದೆ. ಈಗಾಗಲೇ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ ಮಾಡಿದ್ದೇವೆ. ಕಳೆದ ಮೂರುವರೆ ವರ್ಷದಿಂದ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆಯುವ ಕೆಲಸವಾಗಿದೆ. ಈ ಸರ್ಕಾರ ರಾಜ್ಯಕ್ಕೆ ಅಗೌರವ ತೋರಿದೆ ಎಂದರು.

Leave a Comment

Your email address will not be published. Required fields are marked *