ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್3 ಎನ್2 ಬಗ್ಗೆ ನಿಗಾವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಈ ಸಂಬಂಧ ನಾಳೆ ಅಧಿಕಾರಿಗಳು, ತಜ್ಞರ ಜತೆ ಸಭೆ ನಡೆಸಲಾಗುತ್ತೆ. ರೋಗ ಲಕ್ಷಣದಿಂದಾಗಿ ಕೆಮ್ಮು ಉಂಟಾಗಿರುವ ಮಾಹಿತಿ ಇದೆ. ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಬೆಂಗಳೂರು ನಗರದಲ್ಲಿ ಶನಿವಾರ 79 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇ. 7.06 ರಷ್ಟು ದಾಖಲಾಗಿದೆ. ಸೋಂಕಿನಿಂದ 62 ಮಂದಿ ಗುಣಮುಖರಾಗಿದ್ದು, ಮೃತಪಟ್ಟ ವರದಿಯಾಗಿಲ್ಲ. ಸದ್ಯ ಬೆಂಗಳೂರಿನಲ್ಲಿ 266 ಸಕ್ರಿಯ ಕೊರೊನಾ ಸೋಂಕಿನ ಪ್ರಕರಣಗಳಿವೆ.
ರಾಜ್ಯಾದ್ಯಂತ ಶನಿವಾರ ಒಂದೇ ದಿನ 95 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 3,888 ಮಂದಿಗೆ ಮಾತ್ರ ಕೊರೊನಾ ಪರೀಕ್ಷೆ ಮಾಡಲಾಗಿದೆ. ಈ ಪೈಕಿ ಶೇ. 2.44 ಪಾಸಿಟಿವಿಟಿ ದರದಂತೆ 95 ಮಂದಿಗೆ ಸೋಂಕು ದೃಢಪಟ್ಟಿದೆ.