ಸಮಗ್ರ ನ್ಯೂಸ್:ಚಾರ್ಮಾಡಿ ಘಾಟ್‍ನ ಬಿದಿರುತಳ ಸಮೀಪ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದಾಗಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.
ಅರಣ್ಯದ ನಡುವೆ ಹಾದು ಹೋಗಿರುವ ರಸ್ತೆ ಬದಿಯಲ್ಲೇ ಬೆಂಕಿ ದಗದಗಿಸಿ ಉರಿಯುತ್ತಿದ್ದು ಬಿರುಬಿಸಿಲಿನಿಂದ ಒಣಗಿ ನಿಂತ ಹುಲ್ಲು, ಒಣಗಿದ ಎಲೆಗಳಿಂದಾಗಿ ವೇಗವಾಗಿ ಎಲ್ಲೆಡೆಗೆ ಹರಡುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದು ಒಂದೆಡೆ ಬೆಂಕಿ ಕೆಡಿಸಿದರೇ ಮತ್ತೊಂದು ಕಡೆಯಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ.
ಕಳೆದ ಕೆಲ ದಿನಗಳಿಂದ ಚಾರ್ಮಾಡಿ ಘಾಟ್‍ನ ಆಲೇಕಾನ್ ಅರಣ್ಯ, ದೇವರಮನೆ, ಬಲ್ಲಾಳರಾಯನ ದುರ್ಗ ಭಾಗದಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದೆ. ಪೆಬ್ರವರಿ ತಿಂಗಳಲ್ಲಿ ಸುರಿಯುವ ಮಳೆ ಈ ಬಾರಿ ಬಾರದೇ ಇರುವುದರಿಂದ ಕಾಡ್ಗಿಚ್ಚು ಹಬ್ಬುವುದು ಹೆಚ್ಚಾಗಿದೆ.