Ad Widget .

ಪುತ್ತೂರು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು| ಸುಳ್ಯ ಮೂಲದ ಬೈಕ್ ಸವಾರ ಗಂಭೀರ

ಸಮಗ್ರ ನ್ಯೂಸ್: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರ್ ಬಳಿ ಬೈಕೊಂದು ಅಪಘಾತವಾಗಿ ವೃದ್ಧರೋರ್ವರು ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ 8 ಗಂಟೆ ಸಮಯದಲ್ಲಿ ನಡೆದಿದೆ.

Ad Widget . Ad Widget .

ಮೃತರನ್ನು ಕಾವು ಮಿನೋಜಿಕಲ್ಲು ನಾರಾಯಣ ನಾಯ್ಕ ಎಂದು ಗುರುತಿಸಲಾಗಿದ್ದು, ಗಾಯಾಳು ಯುವಕನನ್ನು ಉಬರಡ್ಕ ನಿವಾಸಿ ಗುರುಪ್ರಸಾದ್ ಎಂದು ಗುರುತಿಸಲಾಗಿದೆ.

Ad Widget . Ad Widget .

ಅಪಘಾತವಾಗಿ ಬಿದ್ದಿದ್ದ ಗಾಯಾಳುಗಳನ್ನು ಅದೇ ದಾರಿಯಾಗಿ ಕಚೇರಿಯಿಂದ ಬರುತ್ತಿದ್ದ ಪುತ್ತೂರಿನ ಯುವ ನ್ಯಾಯವಾದಿ ಹಿಂದೂ ಜಾಗರಣ ವೇದಿಕೆಯ ಮುಖಂಡ ಚಿನ್ಮಯ್ ರೈ ಈಶ್ವರಮಂಗಲ, ಅರಿಯಡ್ಕ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾದ ಸಚಿನ್ ರೈ ಪಾಪೆಮಜಲು ಹಾಗೂ ಹಿಂಜಾವೆ ಪ್ರಮುಖ ಜಗದೀಶ್ ಜೊತೆಗೂಡಿ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ನಾರಾಯಣ ನಾಯ್ಕ್ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಗಾಯಾಳು ಯುವಕನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಾಗಿಸಲಾಗಿದೆ.

Leave a Comment

Your email address will not be published. Required fields are marked *