ಸಮಗ್ರ ನ್ಯೂಸ್: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತೊಂದು ಅಭಿಯಾನ ಶುರುಮಾಡಿದೆ.
ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲಿಯೂ ‘ಮಾಡಾಳ್ ಮಿಸ್ಸಿಂಗ್’ ಪೋಸ್ಟರ್ ಅಂಟಿಸಲಾಗಿದ್ದು, A-1 ಆರೋಪಿಯನ್ನು ದಯವಿಟ್ಟು ಹುಡುಕಿ ಕೊಡಿ, 100 ಕ್ಕೆ ಕರೆ ಮಾಡಿ ಮಾಡಾಳ್ ಮಾಹಿತಿ ಕೊಡಿ ಎತ್ತರ 5.9 ಅಡಿ, ವಯಸ್ಸು 72, ಗೋದಿ ಮೈಬಣ್ಣ, ನಾಪತ್ತೆಯಾದ ದಿನಾಂಕ 04-03-2023 ಕರೆ ಮಾಡಿ ಪೊಲೀಸರಿಗೆ ಮಾಹಿತಿನೀಡಿ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕುರಿತು ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಶಾಸಕ ವಿರೂಪಾಕ್ಷಪ್ಪ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ವಿಶೇಷ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠದ ಮುಂದೆ ಅವರ ಪರ ವಕೀಲ ಸಂದೀಪ್ ಎಸ್. ಪಾಟೀಲ್ ಸೋಮವಾರ ಮೆಮೊ ಸಲ್ಲಿಸಿದ್ದಾರೆ. ತುರ್ತಾಗಿ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಆದರೆ, ನ್ಯಾಯಪೀಠ ಮಂಗಳವಾರ ಈ ಅರ್ಜಿ ವಿಚಾರನೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.
ಇನ್ನು ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದ್ದು, ಶಾಸಕ ವಿರೂಪಾಕ್ಷಪ್ಪ, ಅವರ ಪುತ್ರ ಸೇರಿದಂತೆ ಐದು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ.