Ad Widget .

ಕಾಳ್ಗಿಚ್ಚಿಗೆ ಹೊತ್ತಿ‌ ಉರಿದ ಅರಣ್ಯ ಇಲಾಖೆ ಸಿಬ್ಬಂದಿ ಬೈಕ್ ಗಳು

ಸಮಗ್ರ ನ್ಯೂಸ್: ಅರಣ್ಯ ಪ್ರದೇಶಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಸಿಂದಿಗೆರೆ ಗ್ರಾಮದಲ್ಲಿ ನಡೆದಿದೆ. ಕಾಡ್ಗಿಚ್ಚಿನ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿದ ಅರಣ್ಯ ಇಲಾಖೆ ಸಿಬ್ಬಂದಿ ಮೂರು ಬೈಕ್​ಗಳನ್ನು ರಸ್ತೆ ಪಕ್ಕ ನಿಲ್ಲಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Ad Widget . Ad Widget .

ಆದರೆ ಬೆಂಕಿ ಬಿದ್ದ ವ್ಯಾಪ್ತಿಯಲ್ಲಿ ಗಾಳಿ ಜೋರಾಗಿ ಬೀಸಿದ ಪರಿಣಾಮ ಬೆಂಕಿ ಮತ್ತಷ್ಟು ಹೆಚ್ಚಾಗಿದೆ. ಪರಿಣಾಮ ಗಾಳಿಯಲ್ಲಿ ಬಂದ ಬೆಂಕಿಯ ಕಿಡಿ ಅರಣ್ಯ ಇಲಾಖೆ ಸಿಬ್ಬಂದಿಯ ಬೈಕ್​ಗಳಿಗೆ ತಗುಲಿದೆ. ಅದರಂತೆ ಮೂರು ಬೈಕ್​ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ.

Ad Widget . Ad Widget .

Leave a Comment

Your email address will not be published. Required fields are marked *