ಸಮಗ್ರ ನ್ಯೂಸ್: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಾವಣಗೆರೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ತಾಪಮಾನ ದಾಖಲಾಗಿದೆ. ದೆಹಲಿಯಲ್ಲಿ ಮೋಡಕವಿದ ವಾತಾವಣರವಿದ್ದರೆ, ರಾಜಸ್ಥಾನ, ಗುಜರಾತ್, ಮರಾಠವಾಡ, ಮಹಾರಾಷ್ಟ್ರದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.
ಹವಾಮಾನ ಇಲಾಖೆ ಪ್ರಕಾರ, ಮುಂದಿನ 5 ದಿನಗಳಲ್ಲಿ ದೇಶದ ಹವಾಮಾನದ ಮಾದರಿಯಲ್ಲಿ ಯಾವುದೇ ಗಮನಾರ್ಹ ವ್ಯತ್ಯಾಸವಾಗುವುದಿಲ್ಲ. ಮಧ್ಯ ಭಾರತ, ಮಹಾರಾಷ್ಟ್ರ ಮತ್ತು ಗುಜರಾತ್ ಹೊರತುಪಡಿಸಿ, ಇಡೀ ದೇಶದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಇಳಿಕೆ ಅಥವಾ ಹೆಚ್ಚಳದ ಸಾಧ್ಯತೆಗಳಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿ ಗಾಳಿಯ ಎಚ್ಚರಿಕೆಯ ಬೆನ್ನಲ್ಲೇ ಮಾ. 8ರಂದು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.