Ad Widget .

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆಗಳು ರಾಜ್ಯಾದ್ಯಂತ ಇಂದಿನಿಂದ (ಮಾ.9) ಮಾರ್ಚ್ 29 ರವರೆಗೆ ನಡೆಯಲಿದೆ. 7.2 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 3,63,698 ವಿದ್ಯಾರ್ಥಿಗಳು, 3,62,497 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ನಡೆಸಲು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲಾ ತಯಾರಿ‌ ಮಾಡಿಕೊಂಡಿದೆ.

Ad Widget . Ad Widget .

ಬೆಳಗ್ಗೆ 10.15 ರಿಂದ ಮಧ್ಯಾಹ್ನ 1:30ರ ವರೆಗೆ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಅಕ್ರಮ ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಮೊಬೈಲ್ ನಿಷೇಧ ಮೊದಲಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

Ad Widget . Ad Widget .

ಹಿಜಾಬ್ ಸೇರಿ ಯಾವುದೇ ಧರ್ಮಾಧಾರಿತ ಉಡುಪು ಧರಿಸಿ ಬರುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಆರಂಭಕ್ಕೆ ಒಂದು ಗಂಟೆ ಮೊದಲು ಕೇಂದ್ರಕ್ಕೆ ಹೋಗಿ, ಹಾಲ್ ಟಿಕೆಟ್, ಪೆನ್ನು ತೆಗೆದುಕೊಂಡು ಹೋಗಿ. ಮೊಬೈಲ್, ವಾಚ್ ಕ್ಯಾಲ್ಕುಲೇಟರ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗಬೇಡಿ. ಈ ಬಾರಿ ಒಂದು ಅಂಕದ ಬಹು ಆಯ್ಕೆ ಮಾದರಿಗಳು ಪ್ರಶ್ನೆಗಳು ಹೆಚ್ಚಾಗಿರುತ್ತವೆ. ಬಿಎಂಟಿಸಿ, ಕೆಎಸ್‌ಆರ್ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶುಭವಾಗಲಿ.

Leave a Comment

Your email address will not be published. Required fields are marked *