Ad Widget .

ಮಂಗಳೂರಿನಲ್ಲಿ ದೇಶದಲ್ಲೇ ಅತ್ಯದಿಕ ತಾಪಮಾನ ದಾಖಲು| ಇನ್ನೂ ಹೆಚ್ಚಾಗಲಿದೆ ಬಿಸಿಲ ಧಗೆ| ಹಾಗಿದ್ರೆ ಮಳೆ ಯಾವಾಗ?

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಮತ್ತೂಮ್ಮೆ ದೇಶದಲ್ಲಿಯೇ ಗರಿಷ್ಠ ತಾಪಮಾನ 38.8 ಡಿ.ಸೆ. ದಾಖಲಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಗಣನೀಯವಾಗಿ ಏರಿಕೆಯಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇದರ ನಡುವೆಯೇ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget . Ad Widget .

ಬುಧವಾರ ಮಂಗಳೂರಿನಲ್ಲಿ ದಾಖಲಾದ ಈ ತಾಪಮಾನ ಮಾರ್ಚ್‌ ತಿಂಗಳಿನಲ್ಲಿ 2010ರಿಂದೀಚೆಗಿನ ದಾಖಲೆಯ ಉಷ್ಣತೆಯಾಗಿದೆ. ಇದುವರೆಗೆ 2017ರಲ್ಲಿ 37.9 ಡಿ.ಸೆ. ದಾಖಲಾಗಿದ್ದು ದಾಖಲೆಯಾಗಿತ್ತು. ಆರು ದಿನಗಳ ಹಿಂದೆ ಅಂದರೆ, ಮಾ. 2ರಂದು ಮಂಗಳೂರಿನಲ್ಲಿ ದೇಶದಲ್ಲಿಯೇ ಗರಿಷ್ಠ ಎನಿಸಿದ್ದ 37.9 ಡಿ.ಸೆ. ದಾಖಲಾಗಿತ್ತು. ಒಂದು ವಾರದ ಅಂತರದಲ್ಲಿ ತಾಪಮಾನದಲ್ಲಿ ಭಾರೀ ಏರಿಕೆ ಕಂಡಿದೆ. ಇದು ಸಾಮಾನ್ಯ ತಾಪಮಾನಕ್ಕಿಂತ 5.4 ಡಿ.ಸೆ. ಹೆಚ್ಚಾಗಿದೆ. ಕಾರವಾರದಲ್ಲಿ ಬುಧವಾರ 38.6 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 6 ಡಿ.ಸೆ. ಹೆಚ್ಚು ಎನ್ನಲಾಗಿದೆ.

Ad Widget . Ad Widget .

ಈ ಬಾರಿ ಬೇಸಗೆಯು ವಾಡಿಕೆಗಿಂತ ಮೊದಲೇ ಪ್ರಾರಂಭವಾಗಿದೆ. ಇದು ಪ್ರಾರಂಭವಷ್ಟೇ. ಮಾರ್ಚ್‌ ಎರಡನೇ ವಾರದಿಂದ ಬಿಸಿಲ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುತ್ತದೆ ಹವಾಮಾನ ಇಲಾಖೆ. ರಾಜ್ಯದ ಕೆಲವು ಕಡೆ ಸಾಮಾನ್ಯಕ್ಕಿಂತ 3 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ. ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೆಡೆ 2-3 ಡಿ.ಸೆ. ಏರಿಕೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಈಗಿನ ಮಾಹಿತಿಯ ಪ್ರಕಾರ ಮಾರ್ಚ್‌ 14ರ ಬಳಿಕ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. 14ರಂದು ಕರಾವಳಿಯಲ್ಲಿ ಮತ್ತು 15ರಂದು ರಾಜ್ಯದ ಹೆಚ್ಚಿನ ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *