Ad Widget .

ಬೆಂಗಳೂರಿನಲ್ಲಿ ಬಿಎಂಟಿಸಿ‌ ಬಸ್ ಅಗ್ನಿಗಾಹುತಿ| ಕಂಡಕ್ಟರ್ ಸಜೀವ ದಹನ; ಡ್ರೈವರ್ ಬಚಾವ್

ಸಮಗ್ರ‌ ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ.

Ad Widget . Ad Widget .

ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್​ನಲ್ಲಿ ಏಕಾಏಕಿ ಬೆಂಕಿ ದುರಂತ ಸಂಭವಿಸಿದ್ದು, ಬಸ್​ನಲ್ಲೇ ನಿದ್ದೆಗೆ ಜಾರಿದ್ದ ಕಂಡಕ್ಟರ್​ ಸುಟ್ಟು ಕರಕಲಾಗಿದ್ದಾರೆ. ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್​ನಲ್ಲಿ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು. ಬೆಳಗ್ಗೆ ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್​ನಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿದೆ.

Ad Widget . Ad Widget .

ಘಟನೆಯಲ್ಲಿ ನಿರ್ವಾಹಕ ಮುತ್ತಯ್ಯಸ್ವಾಮಿ ಮೃತಪಟ್ಟಿದ್ದರೆ, ಅದೃಷ್ಟವಶಾತ್ ಶೌಚಕ್ಕೆ ಹೋಗಿದ್ದ​ ಬಸ್​ ​ಚಾಲಕ ಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ನಿರ್ವಾಹಕ ಮುತ್ತಯ್ಯಸ್ವಾಮಿ ಮೂಲತಃ ಗದಗ ಜಿಲ್ಲೆಯ ಹಾಲೂರಿನವರು. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Comment

Your email address will not be published. Required fields are marked *