ಸಮಗ್ರ ನ್ಯೂಸ್: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸನ್ನು ಓವರ್‌ಟೆಕ್ ಮಾಡುವ ಸಂದರ್ಭದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಓರ್ವ ಮೃತಪಟ್ಟಿದ್ದು ಮತ್ತೋರ್ವ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸುಬ್ರಹ್ಮಣ್ಯದ ಇಂಜಾಡಿ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಸುಬ್ರಹ್ಮಣ್ಯದ ಕಲ್ಲುಗುಡ್ಡೆ ನಿವಾಸಿ ಪೈಂಟರ್ ರಮೇಶ್ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದ ಇಂಜಾಡಿ ಸಮೀಪ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಇನ್ನೋರ್ವ ಗಾಯಾಳುವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.