ಸಮಗ್ರ ನ್ಯೂಸ್: ಬಡ ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಭೀಜಕ್ಕೆ 10 ಸಾವಿರ ರೂ.ನೆರವು ನೀಡುವ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ 67 ಲಕ್ಷ ರೈತರಿಗೆ ಈ ಲಾಭ ದೊರಕಿಸಿ ಕೊಡಲಾಗುವುದು. ರೈತರಿಗೆ ಮೊಟ್ಟ ಮೊದಲ ಬಾರಿಗೆ ವಿಮೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.