ಸಮಗ್ರ ನ್ಯೂಸ್: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಹೃದಯಾಘಾತದಿಂದ ಧ್ರುವನಾರಾಯಣ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಆರ್. ಧ್ರುವನಾರಾಯಣ ಅವರು ಚಾಮರಾಜನಗರ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದರು.