Ad Widget .

ಹವಾಮಾನ ವರದಿ| ಇಂದಿನಿಂದ ಐದು ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಸಿಲಿನಿಂದ ರಾಜ್ಯದ ಜನತೆ ತತ್ತರಿಸಿರುವ ಕರ್ನಾಟಕದ ಹಲವೆಡೆ, ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget . Ad Widget .

ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಮಳೆ ಆಗಲಿದೆ ಎನ್ನಲಾಗಿದ್ದು, ಮಾರ್ಚ್ 14 ರಿಂದ 18 ರ ವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ, ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ತಿಳಿಸಲಾಗಿದೆ.

Ad Widget . Ad Widget .

ಹಾಗೆಯೇ ಮಾರ್ಚ್ 16 ರಿಂದ ಮಾರ್ಚ್ 18ರ ವರೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬಳ್ಳಾರಿ, ಗದಗ, ಧಾರವಾಡ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಮಾರ್ಚ್ 17 ರಿಂದ 18 ರ ವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

Leave a Comment

Your email address will not be published. Required fields are marked *