ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ -ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿರುವ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ದೂರು ದಾಖಲಿಸಿದೆ.
ಜೈ ಶ್ರೀ ರಾಮ್ ಎಂಬ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ “ಮಿಥುನ್ ರೈಯವರಿಗೆ ಗುಂಡಿನೂಟ ಮಾಡಿಸುತ್ತೇನೆ” ಎಂಬ ಸಂದೇಶದೊಂದಿಗೆ ಕೊಲೆ ಬೆದರಿಕೆ ಪೋಸ್ಟ್ ಒಂದನ್ನು ಹಾಕಲಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಜೀವ ಬೆದರಿಕೆಯ ಪೋಸ್ಟ್ ಗಳನ್ನು ಹಾಕುತ್ತಿರುವ ವ್ಯಕ್ತಿಗಳು ಹಾಗೂ ಹನಿ ಹಿಂದೂಸ್ತಾನಿ ಮುಂಬೈ ಇವರನ್ನು ಪತ್ತೆಹಚ್ಚಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.
ಕೂಡಲೇ ಮಿಥುನ್ ರೈಯವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.