ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ನಿಷೇಧ ಮಾಡಿ ಸರಕಾರ ಅದೇಶ ಹೊರಡಿಸಿದೆ.ಈ ಮೂಲಕ ಹಿಂದೂ ಜಾಗರಣಾ ವೇದಿಕೆಯ ಹೋರಾಟಕ್ಕೆ ಜಯ ಸಿಕ್ಕಿದೆ.
ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂದು ಹಿಂಜಾವೇ ಹಾಗೂ ಇನ್ನಿತರ ಸಂಘಟನೆಗಳು ಆರೋಪಿಸಿದ್ದು, ಇದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು. ಆದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧದ ಅದೇಶ ಮಾಡಿದೆ.
ಅಕ್ರಮ ಗಣಿಗಾರಿಕೆಯ ವಿರುದ್ದ ಹಿಂದೂ ಜಾಗರಣ ವೇದಿಕೆ ವತಿಯಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿತ್ತು. ಗಣಿಗಾರಿಕೆಯನ್ನು ನಿಲ್ಲಿಸಲು ಪ್ರತಿಭಟನೆ, ಸಹಿತ ಅನೇಕ ಹೋರಾಟಗಳು ನಡೆದ ಪರಿಣಾಮ ಹಾಗೂ ಇವರ ಹೋರಾಟದ ಜೊತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ನೀಡಿದ ಬೆಂಬಲದಿಂದ ಗಣಿಗಾರಿಕೆ ಬಂದ್ ಆಗಿದೆ.
ಈ ಬಗ್ಗೆ ಹಿಂದೂ ಜಾಗರಣಾ ವೇದಿಕೆಯವರ ಹೋರಾಟದ ಬಗ್ಗೆ ಶಾಸಕರು ಮುಖ್ಯಮಂತ್ರಿ ಅವರಿಗೆ ಗಣಿಗಾರಿಕೆಯನ್ನು ನಿಲ್ಲಿಸುವ ಅದೇಶ ಮಾಡುವಂತೆ ಮನವಿ ಮಾಡಿದ್ದರು. ಇದೀಗ ಸರಕಾರದ ಆದೇಶಕ್ಕೆ, ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.