ಸಮಗ್ರ ನ್ಯೂಸ್: ಬೆಂಗಳೂರು- ಮೈಸೂರು ಹೈವೇನಲ್ಲಿ ಟೋಲ್ ಸಂಗ್ರಹ ಆರಂಭವಾಗಿದ್ದು, ವಾಹನ ಸವಾರರಿಂದ ಅಸಮಾಧಾನ ವ್ಯಕ್ತವಾಗಿದೆ. ಟೋಲ್ ಸಂಗ್ರಹ ಬೆನ್ನಲ್ಲೇ ಪ್ರಯಾಣಿಕರಿಗೆ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರು- ಮೈಸೂರು ಹೈವೇನಲ್ಲಿ ಸಂಚರಿಸುವ ಸರ್ಕಾರಿ ಬಸ್ ಗಳ ಪ್ರಯಾಣ ದರ ಹೆಚ್ಚಳ ಮಾಡಲಾಗಿದೆ.
ಕೆಎಸ್ ಆರ್ ಟಿಸಿ 15 ರೂ. ಐಷಾರಾಮಿ ಬಸ್ ಗೆ 20 ರೂ, ರಾಜಹಂಸ ಬಸ್ ಗೆ 18 ರೂ ಹೆಚ್ಚಳ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಕೆಎಸ್ ಆರ್ ಟಿಸಿ, ವೋಲ್ವೋ, ರಾಜಹಂಸ ಬಸ್ ಗಳ ಪ್ರಯಾಣ ದರ ಹೆಚ್ಚಳ ಮಾಡಲಾಗಿದ್ದು, ಈ ಮೂಲಕ ಪ್ರಯಾಣಿಕರ ಜೇಬಿಗೆ ಮತ್ತೆ ಕತ್ತರಿ ಬಿದ್ದಿದೆ.
ಇಂದಿನಿಂದ ಬೆಂಗಳೂರು-ಮೈಸೂರು ಹೈವೇಯಲ್ಲಿ ಟೋಲ್ ಸಂಗ್ರಹಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಯಿಂದಲೇ ಟೋಲ್ ಸಂಗ್ರಹಿಸಲಾಗಿದ್ದು, ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. 55 ಕಿಲೋಮೀಟರ್ಗೆ 155 ರೂ. ಟೋಲ್ ನಿಗದಿಯಾಗಿದೆ. ಮತ್ತುಳಿದ 55 ಕಿಲೋಮೀಟರ್ ಗೆ 155 ರೂ. ನಿಗದಿಪಡಿಸಲಾಗಿದೆ. ಅಲ್ಲಿಗೆ ಒಟ್ಟು 300 ರೂ. ಟೋಲ್ ಪಾವತಿಸಬೇಕು.
ಟಿಕೆಟ್ ದರ ಹೆಚ್ಚಳವಾದ ಬಗ್ಗೆ ಕೆಎಸ್‌ಆರ್ಟಿಸಿಯಿಂದ ಪ್ರಕಟಣೆ ನೀಡಲಾಗಿದ್ದು, ಈ ಕುರಿತಂತೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.