ಸಮಗ್ರ ನ್ಯೂಸ್: ರಾಜ್ಯದಲ್ಲಿ ಈ ವರ್ಷ ಮೊದಲ ಮಳೆಯಾಗಿದೆ. ಕೊಡಗು, ಶಿರಸಿ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ ಗಾಳಿ ಮಳೆಯಾಗಿದೆ. ಸುಂಟಿಕೊಪ್ಪ, ಶಿರಸಿಯ ಕೆಲವು ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದೆ. ವರ್ಷದ ಮೊದಲ ಮಳೆ ತಂಪೆರದಿದೆ.
ಕೊಡಗು ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಸುಂಟಿಕೊಪ್ಪ ಬಳಿ ಗಾಳಿ ಸಹಿತ ಆಲಿ ಕಲ್ಲು ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಹೊರನಾಡು, ಕೊಪ್ಪ, ಮೂಡಿಗೆರೆ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಲಕ್ಷಣಗಳು ಕಾಣುತ್ತಿದ್ದು, ಮುಂದಿನ 48ಗಳ ಗಂಟೆಗಳ ಕಾಲ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲ ಪ್ರಮಾಣ ಹೆಚ್ಚಾಗಿ ಸಮುದ್ರದ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಗಾಳಿ ಹಾಗೂ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ಹಾವೇರಿ, ಯಾದಗಿರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ತುಮಕೂರು ಜಿಲ್ಲೆಯ ಕೆಲವು ಕಡೆ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.