ಸಮಗ್ರ ನ್ಯೂಸ್: ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದೇನೆ.
ಸಾರಿಗೆ ನೌಕರರ ಜೊತೆಗೆ ಒಂದು ಸುತ್ತಿನ ಮಾತುಕತೆ ಮಾಡಿದ್ದೇನೆ. ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುತ್ತೇವೆ. ಸಾರಿಗೆ ನೌಕರರ ವೇತನ ಹೆಚ್ಚಳದ ಬಗ್ಗೆ ಮಾತುಕತೆ ನಡೆಯುತ್ತಿದೆ. ಸಾರಿಗೆ ನೌಕರರು ಮುಷ್ಕರ ಮಾಡುವುದಿಲ್ಲ ಅನ್ನೋ ವಿಶ್ವಾಸವಿದೆ. ಸಿಎಂ ಜೊತೆಗೆ ಚರ್ಚೆ ಮಾಡಿ ಅಂತಿಮವಾಗಿ ತೀರ್ಮಾನ ಮಾಡುತ್ತೇವೆ. ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆ ಆಗಲ್ಲ ಎಂದು ತಿಳಿಸಿದ್ದಾರೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರು ಮುಂದಾಗಿದ್ದಾರೆ. ಈ ಮುಷ್ಕರಕ್ಕೆ 4 ನಿಗಮಗಳ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಅಂದಿನಿಂದ 23,000 ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಸಾರಿಗೆ ನೌಕರರ ಸಂಘ ಹೇಳಿದೆ.