ದಶಪಥ ಹೆದ್ದಾರಿಯಲ್ಲಿ ಅಪಘಾತ| ಟೈರ್ ಬ್ಲಾಸ್ಟ್ ಆಗಿ ಕಾರು ಚಾಲಕ ಸ್ಪಾಟೌಟ್

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರು ಟೈಯರ್ ಬ್ಲಾಸ್ಟ್​ ಆಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲ್ಲೂಕಿನ ಲಂಬಾಣಿ ತಾಂಡ್ಯದ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವೇಳೆ ಈ ಅಪಘಾತ ನಡೆದಿದೆ. ಪರಿಣಾಮ ಮಂಜುನಾಥ್ (34) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Ad Widget ... ..

ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಕಾರು ಟೈರ್​​ ಬ್ಲಾಸ್ಟ್​ ಆಗಿದೆ. ವೇಗದಲ್ಲಿ ಚಲಿಸುತ್ತಿದ್ದ ಕಾರಣ ಕಾರು ಪಟ್ಟಿ ಹೊಡೆದು ಗ್ರೀಲ್ಸ್ ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

ಮಂಜುನಾಥ್ ಮೃತದೇಹವನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರಗೆ ರವಾನಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *