Ad Widget .

ಚುನಾವಣೆ ಘೋಷಣೆಗೆ ದಿನಗಣನೆ| ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಬ್ಯಾನರ್ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳಿರುವ ಬೆನ್ನಲ್ಲೇ ಇದೀಗ ದಕ್ಷಿಣಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಫ್ಲೆಕ್ಸ್‌ , ಜಾಹೀರಾತು ಮತ್ತು ಫಲಕಗಳನ್ನು ತೆರವುಗೊಳಿಸಬೇಕು. ರಾಜಕೀಯ ಪಕ್ಷಗಳ ಸಾರ್ವಜನಿಕ ಸಭೆ ಸಮಾರಂಭಗಳ ಮೇಲೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Ad Widget . Ad Widget .

ವಿಧಾನಸಭಾ ಚುನಾವಣೆ ಸದ್ಯದಲ್ಲೆ ಘೋಷಣೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮುನ್ನವೇ ಜಿಲ್ಲಾಡಳಿತವು ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಜ್ಜಾಗಬೇಕು ಎಂದು ಅವರು ಜ್ಞಾಪನಾ ಪತ್ರದಲ್ಲಿ ಮಂಗಳವಾರ ತಿಳಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆಯೇ ಫ್ಲೆಕ್ಸ್‌, ಬ್ಯಾನರ್ ಬಂಟಿಂಗ್‌ಗಳನ್ನು ಅಳವಡಿಸಿರುವುದು ಕಂಡಿಬಂದಿದೆ. ಇದು 1981ರ ಕರ್ನಾಟಕ ತೆರೆದ ಪ್ರದೇಶಗಳ ಕಾಯ್ದೆಯ ಸ್ಪಷ್ಟ ಉಲ್ಲಂಘನೆ. ಸ್ಥಳೀಯ ಸಂಸ್ಥೆಗಳು ಇವುಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಡಳಿತದ ವಿರುದ್ಧ ಗಂಭೀರ ಪರಿಣಾಮಬೀರುತ್ತದೆ ಎಂದು ಅವರು ತಿಳಿಸಿದ್ದಾರೆ.

Ad Widget . Ad Widget .

ಜಿಲ್ಲೆಯಲ್ಲಿ ಅನೇಕ ಸಂಘ ಸಂಸ್ಥೆಗಳು, ರಾಜಕೀಯ ಸಂಘಟನೆಗಳು ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆಯದೆಯೇ ಸಾರ್ವಜನಿಕ ಸಭೆ , ಸಮಾರಂಭಗಳು, ಸಾರ್ವಜನಿಕ ಔತಣ ಕೂಟದಂತಹ ಕಾರ್ಯಕ್ರಮ ಆಯೋಜಿಸುವುದರಿಂದ ಸಾಮಾಜಿಕ ಸ್ವಾಸ್ಥ್ಯ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಮತ್ತು ಕಾನೂನು ಸುವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಉಂಟಾಗುವ ಸಾಧ್ಯತೆ ಇದೆ’ ಎಂದು ಅವರು ಎಚ್ಚರಿಸಿದ್ದಾರೆ.

ರಾಜಕೀಯ ಪಕ್ಷಗಳು ಮತ್ತು ರಾಜಕೀಯ ವ್ಯಕ್ತಿಗಳು ಸ್ಥಳೀಯ ಸಂಸ್ಥೆಗಳ ಅಥವಾ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆಯೇ ಸಾರ್ವಜನಿಕ ಔತಣಕೂಟಗಳನ್ನು ಏರ್ಪಡಿಸುವಂತಿಲ್ಲ. ಇದನ್ನು ಉಲ್ಲಂಘಿಸಿದಲ್ಲಿ ಸ್ಥಳೀಯ ಪ್ರಾಧಿಕಾರಗಳು ಮತ್ತು ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದ್ದಾರೆ.

Leave a Comment

Your email address will not be published. Required fields are marked *