ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಕೊಲೆಯಾಗಿರುವ ಘಟನೆ ಕೊಡಗಿನ ಕುಶಾಲನಗರ ತಾಲೂಕಿನ ಹೊಸಕೋಟೆಯಲ್ಲಿ ನಡೆದಿದೆ.
ಅಕ್ಷತಾ (18) ಕೊಲೆಯಾದ ಯುವತಿ. ಹೇಮಂತ್ ಎಂಬಾತ ಅಕ್ಷತಾಳನ್ನು ಪ್ರೀತಿಸಿ ಮದುವೆಯಾಗಿದ್ದ. 3 ದಿನಗಳ ಹಿಂದೆ ಇಬ್ಬರು ದೇವಾಲಯದಲ್ಲಿ ಮದುವೆಯಾಗಿ ಬಂದಿದ್ದರು. ಈ ಇಬ್ಬರು ಒಂದೇ ಗ್ರಾಮದವರಾಗಿದ್ದು, ಬೇರೆ ಬೇರೆ ಸಮುದಾಯದವರಾಗಿದ್ದರು.
ಹೇಮಂತ್‍ನ ಪೋಷಕರಾದ ದಶರಥ ಮತ್ತು ಗಿರಿಜಾ ಇಬ್ಬರಿಗೂ ಈ ಮದುವೆ ಇಷ್ಟವಿರಲಿಲ್ಲ. ಇದರಿಂದಾಗಿ ಹೇಮಂತ್ ಪೋಷಕರು ಅಕ್ಷತಾ ದಲಿತ ಯುವತಿ ಎನ್ನುವ ಕಾರಣಕ್ಕೆ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನೆ ಮಾಡಲಾಗಿದೆ.