ಕಡಬ: ರಬ್ಬರ್ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ದುರ್ಮರಣ

ಸಮಗ್ರ ನ್ಯೂಸ್: ರಬ್ಬರ್ ಮರ ಟ್ಯಾಪಿಂಗ್ ಮಾಡುವ ಕತ್ತಿ ಎದೆಗೆ ಹೊಕ್ಕು ಗಂಭೀರ ಗಾಯಗೊಂಡು ಮಹಿಳೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ ಎಂದು ಗುರುತಿಸಲಾಗಿದೆ.

Ad Widget ... ..

ಗೀತಾರವರು ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಎಡವಿ ಬಿದ್ದಿದ್ದು, ಈ ವೇಳೆ ಅವರ ಕೈಯಲ್ಲಿದ್ದ ಕತ್ತಿ ಎದೆಯೊಳಗೆ ಹೊಕ್ಕು ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಅವರ ಪತಿ ನೀಡಿದ ದೂರಿನಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *