ಮಾಂಸ ಮಾರಾಟಗಾರರನ್ನು ಥಳಿಸಿ ದರೋಡೆ ಮಾಡಿದ ದಿಲ್ಲಿ ಪೊಲೀಸರು| ಮುಖದ ಮೇಲೆ ಮೂತ್ರ ವಿಸರ್ಜಿಸಿ ಹಲ್ಲೆ

ಸಮಗ್ರ ನ್ಯೂಸ್: ಪೂರ್ವ ದಿಲ್ಲಿಯ ಶಾಹದಾರದಲ್ಲಿ ಇಬ್ಬರು ಮಾಂಸ ಮಾರಾಟಗಾರರನ್ನು ಮೂವರು ದಿಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಏಳು ಮಂದಿ ಥಳಿಸಿ ದರೋಡೆ ಮಾಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

. Ad Widget . Ad Widget . Ad Widget .

ಮಾರ್ಚ್ 7 ರಂದು ಆನಂದ್ ವಿಹಾರ್ ಪ್ರದೇಶದಲ್ಲಿ ಇಬ್ಬರು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಸ್ಕೂಟರ್‌ಗೆ ಢಿಕ್ಕಿ ಹೊಡೆದಾಗ ಘಟನೆ ನಡೆದಿದೆ. ‘ಗೋ ರಕ್ಷಕರು’ ಎನ್ನಲಾಗಿರುವ ಆರೋಪಿಗಳು ಸಂತ್ರಸ್ತರ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ವರದಿಯ ಪ್ರಕಾರ, ಸಂತ್ರಸ್ತರು ತಕ್ಷಣ ಪೊಲೀಸರನ್ನು ಸಂಪರ್ಕಿಸಿದ್ದರೂ ನಾಲ್ಕು ದಿನಗಳ ನಂತರ ಪ್ರಕರಣ ದಾಖಲಿಸಲಾಗಿದೆ.

ಘಟನೆಯಲ್ಲಿ ಭಾಗಿಯಾದ ಎಲ್ಲಾ ಏಳು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ, ಇದರಲ್ಲಿ ಮೂವರು ಪೊಲೀಸರು ಸೇರಿದ್ದಾರೆ. ಈ ಪೈಕಿ ಒಬ್ಬ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅಮಾನತುಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *