ಸಮಗ್ರ ನ್ಯೂಸ್: ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕ ಹಾಗೂ ಕರಾವಳಿಯ ಭಾಗದಲ್ಲಿ ಸಮುದ್ರ ಮಟ್ಟದಿಂದ 1.5 ಕಿಲೋ ಮೀಟರ್ ಎತ್ತರದವರೆಗೆ ಸುಳಿಗಾಳಿ ನಿರ್ಮಾಣವಾಗಿದೆ. ಎಲ್ಲೆಡೆ ಹೆಚ್ಚಾಗಿದ್ದ ತಾಪಮಾನ ತುಸು ಕಡಿಮೆ ಆಗಿದೆ. ಅಕಾಲಿಕ ಹವಾಮಾನ ಬದಲಾವಣೆಗಳ ಪರಿಣಾಮ ಮಾರ್ಚ್ ಇಂದಿನಿಂದ ನಗರದ ಅಲ್ಲಲ್ಲಿ ಹಗುರ ಮಳೆ ನಿರೀಕ್ಷೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಕಳೆದ ಎರಡು ದಿನದಿಂದ ಮಧ್ಯಾಹ್ನ ಹೊರತುಪಡಿಸಿ ಉಳಿದ ಸಮಯದಲ್ಲಿ ತಾಪಮಾನದಲ್ಲಿ ಇಳಿಕೆಯಾಗಿದೆ. ರೀತಿ ಮಾರ್ಚ್ 19ರವರೆಗೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಇಲಾಖೆ ಹೇಳಿದೆ.