ಸುಳ್ಯ: ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿ ಕಡೆ| ಇಂದು (ಮಾ.18) ನಾಲ್ಕೂರಿನಲ್ಲಿ ಡಿಸಿ ಗ್ರಾಮವಾಸ್ತವ್ಯ

ಸಮಗ್ರ ನ್ಯೂಸ್: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ದ.ಕ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಮಾ. 18ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

Ad Widget ... ..

ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಡಿಸಿಯವರೊಂದಿಗೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದು, ಗ್ರಾಮಸ್ಥರು ತಮ್ಮ ಅಹವಾಲು ಹಾಗೂ ಸಮಸ್ಯೆಗಳ‌ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

Ad Widget

Leave a Comment

Your email address will not be published. Required fields are marked *