Ad Widget .

ಮಂಗಳೂರು: ತಂದೆ- ಮಗಳನ್ನು ಬಲಿ ಪಡೆದ ಯಮಸ್ವರೂಪಿ ಟಿಪ್ಪರ್

ಸಮಗ್ರ ನ್ಯೂಸ್: ಟಿಪ್ಪರ್ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ಮಂಗಳೂರು ನಗರದ ನಂತೂರು ಸರ್ಕಲ್ ನಲ್ಲಿ ನಡೆದಿದೆ.

Ad Widget . Ad Widget .

ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಟಿಪ್ಪರ್ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ತಂದೆ – ಮಗಳು ಎನ್ನಲಾಗಿದೆ.

Ad Widget . Ad Widget .

ಘಟನೆ ನಡೆದ ಬೆನ್ನಲ್ಲೆ ಸ್ಥಳೀಯರು ಲಾರಿ ಚಾಲಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು , ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ನಂತೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Leave a Comment

Your email address will not be published. Required fields are marked *