Ad Widget .

Weather report| ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ರೈತರ ಬೆಳೆಗಳಿಗೆ ಅಪಾರ ನಷ್ಟ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮುನ್ಸೂಚನೆ ನೀಡಿದೆ.

Ad Widget . Ad Widget .

ರಾಜ್ಯದ ಉತ್ತರ ಹಾಗು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ತಿಳಿಸಲಾಗಿದ್ದು, ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಿದೆ.

Ad Widget . Ad Widget .

ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ.

ಶುಕ್ರವಾರ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾದರೆ, ಕರಾವಳಿಯಲ್ಲಿ ಒಣಹವೆ ಇತ್ತು. ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ 6 ಸೆಂ.ಮೀ., ಬೀದರ್‌ನ ಹಲಬರ್ಗಾ, ಜನವಾಡ, ಮನ್ನಳ್ಳಿ, ಬೆಂಗಳೂರಿನ ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್‌ ತಲಾ 3, ಮೈಸೂರಿನ ಹುಣಸೂರು, ಕೋಲಾರ, ಚಿಕ್ಕಬಳ್ಳಾಪುರ ತಲಾ 2, ಕಲುºರ್ಗಿಯ ಅಫ‌ಜಲಪುರ, ಮುಧೋಳ, ಯಾದಗಿರಿ ಸೈದಾಪುರ, ರಾಯಚೂರಿನ ದೇವದುರ್ಗ, ಜಾಲಹಳ್ಳಿ, ಬೆಂಗಳೂರಿನ ಕೆಐಎಎಲ್‌ ವಿಮಾನ ನಿಲ್ದಾಣ, ಗೋಪಾಲನಗರ ಎಆರ್‌ಜಿ, ತುಮಕೂರಿನ ಗುಬ್ಬಿ, ಮಧುಗಿರಿ, ರಾಮನಗರದ ಮಾಗಡಿಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಲಿದೆ. ಕಲಬುರಗಿಯಲ್ಲಿ 36.2 ಡಿ.ಸೆ. ರಾಜ್ಯದಲ್ಲೇ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ.

Leave a Comment

Your email address will not be published. Required fields are marked *