Ad Widget .

ಬಿಜೆಪಿಗೆ ಬಾಬುರಾವ್ ಚಿಂಚನಸೂರ್ ಗುಡ್ ಬೈ| ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ

ಸಮಗ್ರ ನ್ಯೂಸ್: ವಿಧಾನ ಪರಿಷತ್ತಿನ ಸದಸ್ಯರಾದ ಬಿಜೆಪಿಯ ಬಾಬುರಾವ್‌ ಚಿಂಚನಸೂರು ಅವರು ಕೊನೆಗೂ ಬಿಜೆಪಿಗೆ ವಿದಾಯ ಹೇಳಿದ್ದಾರೆ. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸೋಮವಾರ ಮಧ್ಯಾಹ್ನ ಖುದ್ದಾಗಿ ಭೇಟಿಯಾಗಿ ತನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ.

Ad Widget . Ad Widget .

ಜತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆಗಳು ಹೆಚ್ಚಿವೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಅವರು ಮತ್ತೆ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನಲಾಗಿದೆ.

Ad Widget . Ad Widget .

ಗುರುಮಿಠಕಲ್‌ ಹಾಗೂ ಚಿತ್ತಾಪುರ ವಿಧಾನಸಭಾ ಕ್ಷೇತ್ರಗಳಿಂದ 5 ಸಲ ಶಾಸಕರಾಗಿದ್ದ ಆಯ್ಕೆಯಾಗಿದ್ದ ಚಿಂಚನಸೂರ್‌ ಅವರು ಕಳೆದ 2018ರ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ಸೇರಿದ್ದರು.

Leave a Comment

Your email address will not be published. Required fields are marked *