Ad Widget .

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಶಿಕ್ಷಣ ಇಲಾಖೆ

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಮಂಡಳಿಯನ್ನು ಒಂದು ಮಾಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂಬುದಾಗಿ ಮರು ನಾಮಕರಣ ಮಾಡಲಾಗಿತ್ತು. ಈ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಮರು ಪದನಾಮೀಕರಿಸಿ ಸರ್ಕಾರ ಆದೇಶಿಸಿದೆ.

Ad Widget . Ad Widget .

ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಸಾರ್ವಜನಿಕ ಶಿಕ್ಷಣ ಆಯುಕ್ತರು ಹಾಗೂ ಅದರ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಕಚೇರಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲಾ, ಕ್ಲಸ್ಟರ್ ಶಾಲೆಗಳು ಮತ್ತು ಕಚೇರಿಗಳ ನಾಮಫಲಕಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಾಲಾ ಶಿಕ್ಷಣ ಇಲಾಖೆ ಎಂದು ಮರು ಪದನಾಮೀಕರಣಗೊಳಿಸುವಂತೆ ಸೂಚಿಸಿದ್ದಾರೆ.

Ad Widget . Ad Widget .

ಇದಷ್ಟೇ ಅಲ್ಲದೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಹುದ್ದೆಯನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಎಂಬುದಾಗಿಯೂ ಪದನಾಮೀಕರಿಸಲಾಗಿದೆ.

Leave a Comment

Your email address will not be published. Required fields are marked *