ಸಮಗ್ರ ನ್ಯೂಸ್: ಪಾಕಿಸ್ತಾನದಲ್ಲಿ ಕಳೆದ ದಿನ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು ಕನಿಷ್ಟ 9 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಪಾಕಿಸ್ತಾನದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶ ಎಂದು ಪಿಎಂಡಿ ಹೇಳಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.8 ಇದೆ.
ಖೈಬರ್ ಪಖ್ತುಂಖ್ವಾ ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿಯ ಪ್ರಕಾರ, ಪಾಕಿಸ್ತಾನದಲ್ಲಿ ಭೂಕಂಪದ ಸಮಯದಲ್ಲಿ ಛಾವಣಿ, ಗೋಡೆ ಮತ್ತು ಮನೆ ಕುಸಿದ ಘಟನೆಗಳಲ್ಲಿ 9 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಿಲ್ಲೆಯಲ್ಲಿ ಎಂಟು ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಪಾಕಿಸ್ತಾನದ ಸ್ವಾತ್ ಜಿಲ್ಲಾ ಪೊಲೀಸ್ ಅಧಿಕಾರಿ ಶಫಿವುಲ್ಲಾ ಗಂದಾಪುರ್ ಜಿಲ್ಲೆಯಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸೈದು ಬೋಧನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸಾವು ಸಂಖ್ಯೆ ಇನ್ನೂ ಖಚಿತವಾಗಿಲ್ಲ. ಪಾಕಿಸ್ತಾನದ ಪಿಎಂಡಿ ಡಿಜಿ ಮೆಹರ್ ಸಾಹಿಬ್ಜಾದ್ ಖಾನ್ ಪ್ರಕಾರ, ಇಸ್ಲಾಮಾಬಾದ್, ಪೇಶಾವರ್, ಲಾಹೋರ್, ರಾವಲ್ಪಿಂಡಿ, ಕ್ವೆಟ್ಟಾ, ಕೊಹತ್, ಲಕ್ಕಿ ಮಾರ್ವತ್, ಡೇರಾ ಇಸ್ಮಾಯಿಲ್ ಖಾನ್, ದಕ್ಷಿಣ ವಜಿರಿಸ್ತಾನ್ ಮತ್ತು ದೇಶದ ಇತರ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ.