ಶ್ರವಣಬೆಳಗೊಳ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (73) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Ad Widget ... ..

ಅನಾರೋಗ್ಯದ ಹಿನ್ನೆಲೆಯಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ.

Ad Widget

ಅನಾರೋಗ್ಯದ ಹಿನ್ನೆಲೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರನ್ನು ಅಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಿಧನರಾಗಿದ್ದಾರೆ. ಸ್ವಸ್ಥಿ ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರಭಕ್ತವರ್ಗವನ್ನು ಹೊಂದಿದ್ದಾರೆ.

1 thought on “ಶ್ರವಣಬೆಳಗೊಳ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ”

Leave a Comment

Your email address will not be published. Required fields are marked *