Ad Widget .

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ| ಲೋಕಸಭೆ ಕಾರ್ಯದರ್ಶಿಯಿಂದ ಆದೇಶ

ಸಮಗ್ರ ನ್ಯೂಸ್: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಕೇರಳದ ವಯನಾಡ್‌ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಾನನಷ್ಟ ಪ್ರಕರಣ ಸಂಬಂಧ ಸೂರತ್‌ ಕೋರ್ಟ್‌ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್‌ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

Ad Widget . Ad Widget . Ad Widget .

2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ಭಾಷಣ ಮಾಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು

Leave a Comment

Your email address will not be published. Required fields are marked *