Weather report| ರಾಜ್ಯದ 9 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ| ಕರಾವಳಿ ಸೇರಿದಂತೆ ಅಲ್ಲಲ್ಲಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ ಶನಿವಾರ ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರು ಸೇರಿ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೊ ಅಲರ್ಟ್ ಘೋಷಿಸಿದೆ.

Ad Widget ... ..

ಬೀದರ್, ಕಲಬುರಗಿ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಭಾನುವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Ad Widget

ಕರಾವಳಿ ಹಾಗೂ ಒಳನಾಡಿನ ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್, ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಶುಕ್ರವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (36.6 ಡಿಗ್ರಿ ಸೆಲ್ಸಿಯಸ್) ಹಾಗೂ ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ (14.6 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ.

Leave a Comment

Your email address will not be published. Required fields are marked *