Ad Widget .

ಮಂಗಳೂರು: ಹೋಳಿ ಡಿಜೆ ಪಾರ್ಟಿಯಲ್ಲಿ ಮೋಜುಮಸ್ತಿ| ದಾಳಿ‌ ನಡೆಸಿದ ಭಜರಂಗದಳ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ಆಯೋಜಿಸಲಾಗಿದ್ದ ಹೋಳಿ ಆಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಇಂದು ಸಂಘಪರಿವಾರದ ಕಾರ್ಯಕರ್ತರು ದಾಳಿ ನಡೆಸಿದ್ದು, ಕಾರ್ಯಕರ್ತರನ್ನೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಹೋಳಿ ಆಚರಣೆಯ ನಡೆಸಲಾದ ಈ ಕಾರ್ಯಕ್ರಮದ ‘ಡಿಜೆ ಪಾರ್ಟಿ’ ಜೊತೆಗೆ ಯುವಕ ಯುವತಿಯರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಂಘ ಪರಿವಾರದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget . Ad Widget .

ಅಲ್ಲದೆ ಸ್ಥಳದಲ್ಲಿದ್ದ ಹೋಳಿ ಸಂಭ್ರಮದ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಮಾಡಿದ್ದಾರೆ. ಈ ವೇಳೆ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ‘6 ಮಂದಿ ಯುವಕರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿರುವ, ಕೆಲವು ಬ್ಯಾನರ್ ಹರಿದು ಹಾಕಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ತನಿಖೆ ನಡೆಸಿ ಪ್ರಕರಣ ದಾಖಲಿಸಲಾಗುವುದು’ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *