ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಹಿಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂಮುಂದಿನ ಐದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಹಾಗೂ ಕರ್ನಾಟಕದ ಒಳನಾಡಿನ ಮೇಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನದಲ್ಲಿ ಉಂಟಾಗುತ್ತಿರುವ ತೀವ್ರ ಬದಲಾವಣೆಯಿಂದ ಈ ವರ್ಷದ ಆರಂಭದ ಪೂರ್ವ ಮುಂಗಾರು ಚಟುವಟಿಕೆಗಳು ಬೇಗ ಪ್ರಾರಂಭವಾಗುತ್ತದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.