Ad Widget .

ಮಂಗಳೂರು: ಅಡ್ಯಾರ್ ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಭಾರೀ ಅಗ್ನಿ ಅವಘಡ| ಕೋಟ್ಯಾಂತರ ರೂ. ನಷ್ಟ

ಸಮಗ್ರ ನ್ಯೂಸ್: ಮಂಗಳೂರು ನಗರದ‌ ಹೊರವಲಯದಲ್ಲಿರುವ ಅಡ್ಯಾರ್ ನ ಪೋಲಾರ್ ಐಸ್ ಕ್ರೀಂ‌ ಸೂಪರ್ ಸ್ಟಾಕಿಸ್ಟ್ ಎಂಬ ನಂದಿನಿ ಐಸ್ ಕ್ರೀಂ ದಾಸ್ತಾನು ಕೇಂದ್ರಕ್ಕೆ ಇಂದು (ಮಾ.28) ಮುಂಜಾನೆ ಎರಡು ಗಂಟೆಯ ಸುಮಾರಿಗೆ ಬೆಂಕಿ ತಗಲಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.

Ad Widget . Ad Widget .

ಘಟನೆಯ ಪರಿಣಾಮ ವಾಹನ ಸೇರಿದಂತೆ ಸುಮಾರು 5 ಕೋ.ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದೆ ಎನ್ನಲಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಸುಮಾರು ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಿಸಿವೆ.

Ad Widget . Ad Widget .

ಕಾರವಾರದಿಂದ ಕಾಸರಗೋಡಿನವರೆಗೆ ನಂದಿನಿ ಐಸ್ ಕ್ರ್ರೀಂ ವಿತರಿಸುವ ಕೇಂದ್ರ ಇದಾಗಿದೆ. ಈ ಕಟ್ಟಡದಲ್ಲಿ ನಂದಿನಿ ಐಸ್ ಕ್ರೀ‍ಮ್ ಪ್ರೊಡಕ್ಟ್‌ಗಳ ದಾಸ್ತಾನು ಇಡಲಾಗಿತ್ತು. ಇದರ ಜತೆಗೆ ಐಸ್ ಕ್ರಿಮ್ ತಯಾರಿಕಾ ಘಟಕಕ್ಕೂ ಬೆಂಕಿ ಹಬ್ಬಿದೆ.

ಘಟನೆಯಲ್ಲಿ ಸಾವು ನೋವು ಸಂಭವಿಸಿಲ್ಲ. ಅಗ್ನಿ ದುರಂತದಿಂದಾಗಿ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ. ಹರ್ಷಮಣಿ ಎಸ್.ರೈ ಎಂಬವರಿಗೆ ಸೇರಿದ ದಾಸ್ತಾನು ಮಳಿಗೆ ಇದಾಗಿದೆ ಅಂತ ತಿಳಿದು ಬಂದಿದೆ.

Leave a Comment

Your email address will not be published. Required fields are marked *