ಸಮಗ್ರ ನ್ಯೂಸ್: ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದ್ದು, ಆರೋಪಿಗೆ ಗ್ರಾಮಸ್ಥರು ಧರ್ಮದೇಟು ನೀಡಿರುವ ಘಟನೆ ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮಹದೇವ (57) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಮಹದೇವ ಬುದ್ದಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಕೂಗಾಡಿದ್ದಾಳೆ. ಕೂಗಾಟದ ಶಬ್ಧ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ ನಂತರ ಆರೋಪಿಯನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಣಸೂರು ಠಾಣಾ ಪೊಲೀಸರು ಆರೋಪಿ ಮಹದೇವನನ್ನು ವಶಕ್ಕೆ ಪಡೆದಿದ್ದಾರೆ ಆದರೆ ಮಹದೇವ ಅಷ್ಟೊತ್ತಿಗಾಗಲೇ ಅಸ್ವಸ್ಥನಾಗಿದ್ದನು ಈ ಹಿನ್ನೆಲೆ ಆತನನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.