Ad Widget .

ಪತ್ರಕರ್ತರಿಗೂ ಪೋಸ್ಟಲ್ ವೋಟಿಂಗ್ ಗೆ ಅವಕಾಶ| ಧನ್ಯವಾದ ತಿಳಿಸಿದ KUWJ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ.

Ad Widget . Ad Widget .

ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು)
ತಮ್ಮ ಮತವಿರುವ ಕ್ಷೇತ್ರದಲ್ಲಿ ಮತದಾನ ಮಾಡಲು ಅವಕಾಶ ದೊರೆತಿರುವುದು ಅನುಕೂಲವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.

Ad Widget . Ad Widget .

ಆನ್ ಲೈನ್ ವೋಟಿಂಗ್ ಅವಕಾಶ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೆಯುಡಬ್ಲ್ಯೂಜೆ ಪತ್ರ ಬರೆದಿತ್ತು. ದೃಶ್ಯ ಮುದ್ರಣ, ರೇಡಿಯೋ ಮಾಧ್ಯಮಗಳ ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು ಪ್ರತಿ ಚುನಾವಣೆ ವೇಳೆಯಲ್ಲೂ ಮತದಾನದಿಂದ ವಂಚಿತರಾಗುತ್ತಿದ್ದಾರೆ ಎನ್ನುವ ವಿಷಯವನ್ನು ಗಮನಕ್ಕೆ ತಂದಿತ್ತು.

ಪತ್ರಕರ್ತರ ಬೇಡಿಕೆ ಪರಿಗಣಿಸಿ ಪೋಸ್ಟಲ್ ವೋಟಿಂಗ್ ಅವಕಾಶ ಮಾಡಿಕೊಟ್ಟಿರುವ ಚುನಾವಣಾ ಆಯೋಗಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಧನ್ಯವಾದ ತಿಳಿಸಿದೆ.

Leave a Comment

Your email address will not be published. Required fields are marked *