ಕಡಬ: ದೈವ ನರ್ತನ ವೇಳೆಯಲ್ಲಿಯೇ ಕುಸಿದು ಬಿದ್ದು ದೈವಾಧೀನನಾದ ನರ್ತಕ|

ಸಮಗ್ರ ನ್ಯೂಸ್: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಸಾವನ್ನಪ್ಪಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.

Ad Widget ... ..

ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದ ದುರ್ದೈವಿ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

Ad Widget

ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆತಂದರೂ ಪ್ರಯೋಜನವಾಗಿಲ್ಲ.

Leave a Comment

Your email address will not be published. Required fields are marked *