ಸಮಗ್ರ ನ್ಯೂಸ್: ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುರುವಾರ(ಮಾ.30) ದಿಂದ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರದಂದು ಮುನ್ಸೂಚನೆ ನೀಡಿದೆ.
”ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ” ಎಂದು ಹವಾಮಾನ ಇಲಾಖೆ ಘೋಷಿಸಿದೆ. ಬುಧವಾರ ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಜಿಲ್ಲೆಯ ಸುತ್ತಮುತ್ತ ಹಗುರು ಮಳೆಯಾಗಿದೆ.
‘ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದಿರುವ ಹವಾಮಾನ ಇಲಾಖೆ, ದಕ್ಷಿಣ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸೆಕೆ ಮುಂದುವರಿಯಲಿದೆ. ಕೆಲವೆಡೆ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ರಾಜ್ಯದಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ