ಕಿನ್ನಿಗೋಳಿ: ತೀವ್ರ ಜ್ವರಕ್ಕೆ ಸಾವನಪ್ಪಿದ ಬಾಲಕ….!!

Samagra news: ತೀವ್ರ ಜ್ವರಕ್ಕೆ ಬಾಲಕನೋಬ್ಬ ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಸಂಭವಿಸಿದೆ.

. Ad Widget . Ad Widget

ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ.

. Ad Widget . . Ad Widget . Ad Widget

ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ಇನ್ನು ಚಿಕಿತ್ಸೆ ಫಲಕಾರಿಯಾಗದೆ ಹಿಲಾಲ್ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *